ನವದೆಹಲಿ, 4 ಡಿಸೆಂಬರ್(ಹಿ.ಸ):
ಆ್ಯಂಕರ್ :
ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಉಭಯ ಸದನಗಳ ಸುಗಮ ಕಲಾಪ ಕುರಿತು ಎಲ್ಲ ರಾಜಕೀಯ ಪಕ್ಷಗಳ ಜೊತೆ ಸರ್ಕಾರ ಈಗಾಗಲೇ ಸಮಾಲೋಚನೆ ನಡೆಸಿ ಕಲಾಪ ನಡೆಸಲು ಸಹಕರಿಸುವಂತೆ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜಕೀಯ ಪಕ್ಷಗಳ ಮುಖಂಡರಿಗೆ ಮನವಿ ಮಾಡಿದ್ದಾರೆ. ಸಂಸತ್ನಲ್ಲಿ ೧೯ ವಿಧೇಯಕಗಳನ್ನು ಮಂಡಿಸಲಾಗುವುದು. ವಿಧೇಯಕಗಳ ಮೇಲೆ ಪರ್ಯಾಲೋಚನೆ ನಡೆಸಿ ಅಂಗೀಕರಿಸುವಂತೆ ಸಚಿವರು ಮನವಿ ಮಾಡಿದ್ದಾರೆ. ೧೫ ದಿನಗಳ ಕಾಲ ನಡೆಯುವ ಸಂಸತ್ ಕಲಾಪದಲ್ಲಿ ಐದು ರಾಜ್ಯಗಳ ವಿಧಾನಸಭಾ ಫಲಿತಾಂಶ ಸೇರಿದಂತೆ ಹಲವು ವಿಷಯಗಳ ಮೇಲೆ ಚರ್ಚೆಯಾಗುವ ನಿರೀಕ್ಷೆಯಿದೆ. ಸಂಸತ್ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಗ್ಗೆಯೂ ಸಂಸತ್ ಪರಾಮರ್ಶಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್
