ಚೆನ್ನೈ, 5 ಡಿಸೆಂಬರ್(ಹಿ.ಸ):
ಆ್ಯಂಕರ್ :ಮಿಚುವಾಂಗ್ ಚಂಡಮಾರುತಕ್ಕೆ ಚೆನ್ನೈ ಸಂಪೂರ್ಣ ತತ್ತರಿಸಿ ಹೋಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿ ಚಂಡಮಾರುತದ ಅಬ್ಬರಕ್ಕೆ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವೆಡೆ ವಿದ್ಯುತ್ ಸಂಪರ್ಕ ಕಡಿಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.
ಚಂಗುಲುಗಟ್ಟುವಿನಲ್ಲಿ ಇಬ್ಬರು ಸೇರಿದಂತೆ ಚಂಡಮಾರುತದ ಅಬ್ಬರಕ್ಕೆ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಚೆನ್ನೈ ಸಂಪೂರ್ಣ ಜಲಾವೃತಗೊಂಡು ಕಾರು, ದ್ವಿಚಕ್ರ ವಾಹನಗಳು ನೀರಿನಲ್ಲಿ ತೇಲಿ ಹೋಗುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ. ಜನರು ಆಶ್ರಯ ಪಡೆಯಲು ಹರಸಾಹಸ ಪಡುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
