
ಭೂಪಾಲ್, 5 ಡಿಸೆಂಬರ್(ಹಿ.ಸ):
ಆ್ಯಂಕರ್ :
ಮಧ್ಯಪ್ರದೇಶ ದಲ್ಲಿ ನಡೆದಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗಿದೆ, ಹಾಗೆಯೇ ಕಾಂಗ್ರೆಸ್ ಸೋಲನ್ನುಂಡಿದೆ. ಹೀಗಾಗಿ ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕಮಲ್ನಾಥ್ಅ ವರ ರಾಜೀನಾಮೆಯನ್ನು ಕಾಂಗ್ರೆಸ್ ಕೇಳಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಬಿಜೆಪಿಯು 230 ವಿಧಾನಸಭಾ ಸ್ಥಾನಗಳಲ್ಲಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಸಾಧಿಸಿದೆ. ಆದರೆ ಕಾಂಗ್ರೆಸ್ ಕೇವಲ 66 ಸ್ಥಾನಗಳನ್ನು ಗೆದ್ದಿದೆ. 2018ಕ್ಕೆ ಹೋಲಿಸಿದರೆ ಕಾಂಗ್ರೆಸ್ 52 ಸ್ಥಾನಗಳನ್ನು ಕಳೆದುಕೊಂಡಿದೆ.
ಆದರೆ ಬಿಜೆಪಿ 57 ಸ್ಥಾನಗಳ ಲಾಭ ಪಡೆದಿದೆ. ಎಕ್ಸಿಟ್ ಪೋಲ್ನಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ನಡೆಯಲಿದೆ ಎಂದು ಹೇಳಲಾಗಿತ್ತು. ಕಮಲ್ ನಾಥ್ ಛಿಂದ್ವಾರಾ ಕ್ಷೇತ್ರದಲ್ಲಿ ಗೆಲುವುಸ ಸಾಧಿಸಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು, ಆದರೆ ಮುಖ್ಯಮಂತ್ರಿಯಾದ ಕಮಲ್ನಾಥ್ ಅವರು ಪಕ್ಷವನ್ನು ನಿಭಾಯಿಸಲು ಸಾಧ್ಯವಾಗಲಿಲ್ಲ, ಬಿಜೆಪಿ ಮಧ್ಯದಲ್ಲಿ ಸರ್ಕಾರವನ್ನು ರಚಿಸಿತು.
ಇದಾದ ನಂತರ ಕಮಲ್ನಾಥ್ಗೆ ಪಕ್ಷದ ಜವಾಬ್ದಾರಿಯನ್ನು ನೀಡಲಾಗಿತ್ತು. ಮಧ್ಯಪ್ರದೇಶ ಚುನಾವಣೆಗೆ ನಿರ್ಧಾರ ತೆಗೆದುಕೊಳ್ಳುವ ಸಂಪೂರ್ಣ ಅಧಿಕಾರವನ್ನು ಕಮಲ್ನಾಥ್ಗೆ ಕಾಂಗ್ರೆಸ್ ನೀಡಿತ್ತು. ಇದೀಗ ಕಾಂಗ್ರೆಸ್ ಪಕ್ಷದ ಸೋಲಿನ ಕಾರಣ ಕುರಿತು ಮಂಥನ ನಡೆಯುತ್ತಿದೆ.
ಹಿಂದೂಸ್ತಾನ್ ಸಮಾಚಾರ್
