ಜೈಪುರ್,6 ಡಿಸೆಂಬರ್(ಹಿ.ಸ):
ಆ್ಯಂಕರ್ :
ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಹತ್ಯೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಸ್ಥಾನ ಬಂದ್ಗೆ ಕರೆ ನೀಡಲಾಗಿದೆ. ಇಬ್ಬರು ದುಷ್ಕರ್ಮಿಗಳು ಮನೆಗೆ ನುಗ್ಗಿ ಸುಖದೇವ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ಹತ್ಯೆಯ ಸಿಸಿಟಿವಿ ದೃಶ್ಯಾವಳಿ ಕೂಡ ಹೊರಬಿದ್ದಿದೆ.ಈ ಹತ್ಯೆಯನ್ನು ಖಂಡಿಸಿ ವಿವಿಧೆಡೆ ಪ್ರತಿಭಟನೆ ನಡೆಸಿದ್ದಾರೆ. ಉದಯಪುರ ವಿಭಾಗ ಬಂದ್ಗೆ ಕರೆ ನೀಡಲಾಗಿದೆ. ಆರೋಪಿಗಳನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ.
ಇದರಿಂದ ಬಸ್ನ ಗಾಜು ಒಡೆದಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಜನರ ನಡುವೆ ನೂಕುನುಗ್ಗಲು ಉಂಟಾಯಿತು. ಚುರು ಜಿಲ್ಲೆಯ ತಾರಾನಗರದ ಚಲ್ಕೊಯ್ ಗ್ರಾಮದ ಬಳಿ, ಜನರ ಗುಂಪೊಂದು ರಸ್ತೆಯ ಮಧ್ಯದಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿದರು. ಸುಖದೇವ್ ಸಿಂಗ್ ಹತ್ಯೆ ಖಂಡಿಸಿ ಜೈಪುರ ಬಂದ್ಗೆ ಕರೆ ನೀಡಲಾಗಿತ್ತು. ಇಡೀ ಸಮಾಜ ಬೆಂಬಲಿಸಿದೆ. ಶ್ರೀಧರ ಬಾಲಾಜಿ ಟ್ರೇಡ್ ಅಸೋಸಿಯೇಶನ್ ಅಧ್ಯಕ್ಷ ಡಾ.ರವಿ ಜಿಂದಾಲ್ ಬಂದ್ಗೆ ಬೆಂಬಲ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
