ನವದೆಹಲಿ,6 ಡಿಸೆಂಬರ್(ಹಿ.ಸ):
ಆ್ಯಂಕರ್ :
ನವದೆಹಲಿ: ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಸಂಸತ್ ಭವನದ ಆವರಣದಲ್ಲಿ ಆಚರಿಸಲಾಯಿತು.
ಸಂಸತ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ , ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಇನ್ನಿತರ ಗಣ್ಯಮಾನ್ಯರು ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವದಿಂದ ವಂದಿಸಿದರು. ಜೊತೆಗೆ ಸಂಸತ್ ಆವರಣದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಂವಿಧಾನ ಶಿಲ್ಪಿಯನ್ನು ನೆನೆದರು. ಲಕ್ನೋದಲ್ಲಿ ಬಿಎಸ್ ಪಿ ಮುಖ್ಯ ಮಾಯಾವತಿ ಅವರೂ ಸಹ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್
