ಬೆಳಗಾವಿ,,6 ಡಿಸೆಂಬರ್(ಹಿ.ಸ):
ಆ್ಯಂಕರ್ : ಹಿಂದುಳಿದ ವರ್ಗದ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳಿಂದ ಸ್ವಾವಲಂಬಿ ಗಂಗಾಕಲ್ಯಾಣ ಯೋಜನೆಯಡಿ ನಿರೀಕ್ಷಿತ ಮಟ್ಟದಲ್ಲಿ ಬೋರ್ವೆಲ್ ಗಳ ಮಂಜೂರಾತಿ ಆಗುತ್ತಿಲ್ಲ ಎಂದು ಪಕ್ಷಾತೀತವಾಗಿ ಶಾಸಕರು ವಿಧಾನಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು. ಪ್ರಶ್ನೋತ್ತರದ ಅವಧಿಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಮತ್ತು ಚಾಮರಾಜನಗರದ ಪುಟ್ಟರಂಗಶೆಟ್ಟಿ ಅವರು ಕೇಳಿದ ಪ್ರಶ್ನೆಗಳು ವ್ಯಾಪಕ ಚರ್ಚೆಗಳಿಗೆ ಗ್ರಾಸವಾಯಿತು.
ಪುಟ್ಟರಂಗಶೆಟ್ಟಿಯವರು ಪ್ರಶ್ನೆ ಕೇಳುತ್ತಾ, ವಿವಿಧ ಅಭಿವೃದ್ಧಿ ನಿಗಮಗಳಿಗೆ ಸಾಕಷ್ಟು ಅನುದಾನ ನೀಡಲಾಗಿದೆ. ಆದರೆ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಅನುದಾನ ಮೀಸಲಿಟ್ಟಿಲ್ಲ. ಹೀಗಾಗಿ ಜನರಿಗೆ ಸೌಲಭ್ಯ ಸಿಗುತ್ತಿಲ್ಲ . ಪ್ರತಿದಿನ ಅರ್ಜಿ ಹಿಡಿದು ಸಾವಿರಾರು ಮಂದಿ ನಮ್ಮ ಮನೆಬಾಗಿಲಿಗೆ ಬರುತ್ತಿದ್ದಾರೆ. ಅವರಿಗೆ ಸಮಜಾಯಿಷಿ ನೀಡುವುದೇ ಕಷ್ಟವಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಬಿ.ಸಿ.ಪಾಟೀಲ್ ಮಾತನಾಡಿ, ವಿವಿಧ ಅಭಿವೃದ್ಧಿ ನಿಗಮಗಳಿಂದ ಸ್ವಾವಲಂಬಿ ಗಂಗಾ ಕಲ್ಯಾಣ ಯೋಜನೆಯಡಿ ಒಂದು ಅಥವಾ ಎರಡು ಬೋರ್ವೆಲ್ಗಳನ್ನು ಮಂಜೂರು ಮಾಡುತ್ತಿದ್ದಾರೆ. ಇದರಿಂದ ಫಲಾನುಭವಿಗಳ ಆಯ್ಕೆ ಕಷ್ಟವಾಗುತ್ತಿದೆ ಎಂದು ಆಕ್ಷೇಪಿಸಿದರು. ಶಾಸಕ ಸಿದ್ಧು ಸವದಿ ಇದಕ್ಕೆ ಧ್ವನಿಗೂಡಿಸಿದರು.
ಉತ್ತರ ನೀಡಿದ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಶಿವರಾಜ ತಂಗಡಗಿ ಈ ಹಿಂದಿನ ಸರ್ಕಾರದಲ್ಲಿ ಭಾಷಣ ಮಾಡಿದ ಕಡೆಯಲ್ಲೆಲ್ಲಾ ಜಾತಿವಾರು ಅಭಿವೃದ್ಧಿ ನಿಗಮಗಳನ್ನು ಘೋಷಣೆ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್
