ಬೆಳಗಾವಿ,7 ಡಿಸೆಂಬರ್(ಹಿ.ಸ):
ಆ್ಯಂಕರ್ :
ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿದ್ದಾರೆ. ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್(24) ಹಾಗೂ ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಮೃತ ದುರ್ದೈವಿಗಳು. ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಸಮಿಕ್ಷಾ ಮತ್ತು ಮೋಹನ್ ಮಾರುತಿ ಸಜೀವ ದಹನವಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
