ಹೈದರಾಬಾದ್,7 ಡಿಸೆಂಬರ್(ಹಿ.ಸ):
ಆ್ಯಂಕರ್ :
ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಎ.ರೇವಂತರೆಡ್ಡಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಇದಕ್ಕಾಗಿ ಹೈದರಾಬಾದ್ನ ಲಾಲ್ ಬಹುದ್ದೂರ್ ಶಾಸ್ತ್ರಿ ಕ್ರೀಡಾಂಗಣ ಸಕಲ ರೀತಿ ಸಜ್ಜುಗೊಳ್ಳುತ್ತಿದೆ.
ಮಧ್ಯಾಹ್ನ ೧ ಗಂಟೆ ೪ ನಿಮಿಷಕ್ಕೆ ತೆಲಂಗಾಣ ರಾಜ್ಯಪಾಲರಾದ ತಮಿಳ್ ಸಾಯಿ ಸೌಂದರ್ ರಾಜನ್ ಅವರು ನೂತನ ಮುಖ್ಯಮಂತ್ರಿ ಮತ್ತು ಸಚಿವರಿಗೆ ಪ್ರಮಾಣ ವಚನ ಮತ್ತು ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.
ರೇವಂತ್ರೆಡ್ಡಿ ಅವರು ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನೇಕ ಸಚಿವರು, ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
