ಕತಾರ್, 8 ಡಿಸೆಂಬರ್(ಹಿ.ಸ):
ಆ್ಯಂಕರ್ :
ಕತಾರ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಮಾಜಿ ನೌಕಾಪಡೆಯ ಎಂಟು ಸಿಬ್ಬಂದಿಯನ್ನು ಭಾರತದ ರಾಯಭಾರಿ ಭೇಟಿಯಾಗಿದ್ದಾರೆ . ನಮ್ಮ ರಾಯಭಾರಿ ಜೈಲಿನಲ್ಲಿರುವ ಎಲ್ಲಾ ಎಂಟು ಜನರನ್ನು ಭೇಟಿಯಾಗಲು ಕಾನ್ಸುಲರ್ ಪ್ರವೇಶವನ್ನು ಪಡೆದರು ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ. ಮರಣದಂಡನೆಯ ವಿರುದ್ಧ ಭಾರತದ ಮೇಲ್ಮನವಿ ಬಗ್ಗೆ ಮಾತನಾಡಿದ ಬಾಗ್ಚಿ, “ಇದುವರೆಗೆ ಎರಡು ವಿಚಾರಣೆಗಳು ನಡೆದಿವೆ (ಇವುಗಳು ನವೆಂಬರ್ 23 ಮತ್ತು ನವೆಂಬರ್ 30 ರಂದು ನಡೆದವು). ನಾವು ವಿಷಯವನ್ನು ಹತ್ತಿರದಿಂದ ಫಾಲೋ ಮಾಡುತ್ತಿದ್ದೇವೆ. ಎಲ್ಲಾ ಕಾನೂನು ಮತ್ತು ದೂತಾವಾಸದ ಸಹಾಯವನ್ನು ನೀಡುತ್ತಿದ್ದೇವೆ. ಇದು ಸೂಕ್ಷ್ಮ ಸಮಸ್ಯೆ. ಆದರೆ ನಾವು ಏನು ಮಾಡಬಹುದೋ ಅದನ್ನು ಮಾಡುತ್ತೇವೆ ಎಂದಿದ್ದಾರೆ.
ಮುಂದಿನ ವಿಚಾರಣೆಯನ್ನು ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ. ನಾವಿಕರೊಂದಿಗಿನ ರಾಯಭಾರಿ ಸಭೆಯು ಸಕಾರಾತ್ಮಕ ಹೆಜ್ಜೆಯಾಗಿ ಕಂಡುಬಂದಿದೆ. ಇದು ಎಂಟು ನೌಕಾ ಸಿಬ್ಬಂದಿಯನ್ನು ರಾಯಭಾರಿ ಭೇಟಿ ಮಾಡಿದ್ದರಿಂದ ಈ ಮೊದಲು ಇದ್ದ ಕಳವಳವನ್ನು ಕೊಂಚ ಕಡಿಮೆ ಮಾಡಿದಂತೆ ಕಾಣುತ್ತದೆ ಎಂದರು.
ಹಿಂದೂಸ್ತಾನ್ ಸಮಾಚಾರ್
