
ದೆಹಲಿ, 8 ಡಿಸೆಂಬರ್(ಹಿ.ಸ):
ಆ್ಯಂಕರ್ :
ಇಂದು ನಡೆಯಲಿರುವ ಲೋಕಸಭೆಯ ಕಲಾಪದಲ್ಲಿ ಕಡ್ಡಾಯವಾಗಿ ಹಾಜರಾಗುವಂತೆ ಎಲ್ಲಾ ಸಂಸದರಿಗೆ ಬಿಜೆಪಿ ವಿಪ್ ಜಾರಿ ಮಾಡಿದೆ.
ಶಾಸಕಾಂಗ ವ್ಯವಹಾರಗಳ ಕುರಿತು ಚರ್ಚಿಸಲು ಸದನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಮೂರು ಸಾಲಿನ ವಿಪ್ ಜಾರಿ ಮಾಡಲಾಗಿದೆ.
ಕೆಲವು ಪ್ರಮುಖ ಮಸೂದೆಗಳನ್ನು ಚರ್ಚೆಗೆ ತೆಗೆದುಕೊಳ್ಳಲಾಗುವುದು ಮತ್ತು ಸರ್ಕಾರದ ನಿಲುವನ್ನು ಬೆಂಬಲಿಸಲು ಕಲಾಪದಲ್ಲಿ ಎಲ್ಲ ಸಂಸದರು ಕಡ್ಡಾಯವಾಗಿ ಹಾಜರಿರಬೇಕು ಎಂದು ಬಿಜೆಪಿ ಅಧಿಕೃತ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್
