ಹೈದರಾಬಾದ್, 8 ಡಿಸೆಂಬರ್(ಹಿ.ಸ):
ಆ್ಯಂಕರ್ :
: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಂದ್ರಶೇಖರ್ ರಾವ್ ಅವರಿಂದು (ಡಿ.8) ಮುಂಜಾನೆ 2 ಗಂಟೆ ಸುಮಾರಿಗೆ ಹೈದರಾಬಾದ್ನ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು, ಸೊಂಟದ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಹೈದರಾಬಾದ್ನ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ. ಚಂದ್ರಶೇಖರ್ ರಾವ್ ಅವರು ಕುಸಿದು ಬಿದ್ದ ನಂತರ ಸೊಂಟ ಮುರಿತಕ್ಕೆ ಒಳಗಾಗಿಗಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ. ಆರೋಗ್ಯ ತಪಾಸಣೆ (ಸ್ಕ್ಯಾನಿಂಗ್) ನಡೆಸಿದ ಬಳಿಕ ನಿಜಾಂಶ ತಿಳಿಯಲಿದೆ ಎಂದು ವೈದ್ಯರು ಹೇಳಿದ್ದಾರೆ. ಕೆಸಿಆರ್ ಕಳೆದ ಮೂರು ದಿನಗಳಿಂದ ತಮ್ಮ ಮನೆಯಲ್ಲಿ ಜನರನ್ನು ಭೇಟಿಯಾಗುತ್ತಿದ್ದರು ಎಂದು ಹೇಳಲಾಗಿದೆ.
ಹಿಂದೂಸ್ತಾನ್ ಸಮಾಚಾರ್
