
ನವದಹೆಲಿ, 9 ಡಿಸೆಂಬರ್(ಹಿ.ಸ):
ಆ್ಯಂಕರ್ :
‘ಜನರಿಂದ ಲೂಟಿ ಮಾಡಿದ ಪ್ರತಿ ಪೈಸೆಯನ್ನೂ ಹಿಂದಿರುಗಿಸಬೇಕು, ಇದು ಮೋದಿ ಗ್ಯಾರಂಟಿ’ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ಒಡಿಶಾದ ಕಾಂಗ್ರೆಸ್ ಸಂಸದ ಧೀರಜ್ ಸಾಹು ಅವರಿಗೆ ಸೇರಿವೆ ಎನ್ನಲಾದ ಸ್ಥಳಗಳ ಮೇಲೆ ಒಡಿಶಾದಲ್ಲಿ ದಾಳಿ ಮಾಡಿರುವ ಆದಾಯ ತೆರಿಗೆ ಇಲಾಖೆ, 225 ಕೋಟಿ ರೂ. ಗೂ ಹೆಚ್ಚು ನಗದು ವಶಕ್ಕೆ ಪಡೆದಿರುವ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಮೋದಿ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ದೇಶದ ಜನರು ಈ ನೋಟುಗಳ ಕಂತೆಯನ್ನು ನೋಡಬೇಕು ಮತ್ತು ಅದರ (ಕಾಂಗ್ರೆಸ್) ನಾಯಕರನ್ನು ‘ನಿಮ್ಮ ಪ್ರಾಮಾಣಿಕತೆಯ ವಿಳಾಸ ಎಲ್ಲಿದೆ’ ಎಂದು ಕೇಳಬೇಕು. ಜನರಿಂದ ಲೂಟಿ ಮಾಡಿದ ಪ್ರತಿ ಪೈಸೆಯನ್ನೂ ಹಿಂದಿರುಗಿಸಬೇಕಾಗುತ್ತದೆ. ಇದು ಮೋದಿ ಗ್ಯಾರಂಟಿ’ ಎಂದಿದ್ದಾರೆ.
ಇದರೊಂದಿಗೆ ಐಟಿ ವಶಕ್ಕೆ ಪಡೆದಿರುವ ಹಣದ ಕಂತೆಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
