
ಕುಷ್ಟಗಿ, 9 ಡಿಸೆಂಬರ್(ಹಿ.ಸ):
ಆ್ಯಂಕರ್ : ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದ ಬಳಿಯ ರಾಷ್ಟ್ರೀಯ ಚತುಷ್ಪಥ 50ರ ಪಕ್ಕದ ಜಮೀನೊಂದರಲ್ಲಿ ಒಬ್ಬನನ್ನು ತಲೆ ಕಡಿದು ಬರ್ಬರವಾಗಿ ಹತ್ಯೆಗೈದು ಬತ್ತಲೆ ಮೃತದೇಹವನ್ನು ಬೀಸಾಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಕೊಲೆಯಾದ ವ್ಯಕ್ತಿ ಇಳಕಲ್ಲ ಮೂಲದ ಭೀಮರಾವ್ ಸುರೇಶ ಮಬ್ರುಂಕರ (32) ಆಟೋ ಚಾಲಕ ಎನ್ನಲಾಗಿದೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಕೊಪ್ಪಳ ಎಸ್ಪಿ ಯಶೋಧಾ ವಂಟಿಗೋಡಿ, ಕುಷ್ಟಗಿ ಸಿಪಿಐ ಯಶವಂತ ಬಿಸನಳ್ಳಿ, ಪಿಎಸೈ ಮುದ್ದುರಂಗಸ್ವಾಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಕೊಲೆ ಸುಳಿವು ಕಾರ್ಯ ಕೈಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್
