ಜೈಪುರ್, 15 ಡಿಸೆಂಬರ್(ಹಿ.ಸ):
ಆ್ಯಂಕರ್ :
ರಾಜಸ್ಥಾನದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಭಜನ್ ಲಾಲ್ ಶರ್ಮಾ ಇಂದು ರಾಜಸ್ಥಾನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜ್ಯಪಾಲ ಕಲ್ರಾಜ್ ಮಿಶ್ರಾ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿರುವ ಶರ್ಮಾ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಉಪಮುಖ್ಯಮಂತ್ರಿಗಳಾದ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಸಹ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಜೈಪುರದ ಅಲ್ಭರ್ಟ್ ಹಾಲ್ನಲ್ಲಿ ಬೆಳಗ್ಗೆ ೧೧.೧೫ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾಗವಹಿಸಲಿದ್ದಾರೆ. ಇವರಲ್ಲದೆ, ಕೇಂದ್ರ ಸಚಿವರು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಲಾಗಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸರ್ಕಾರ ಮತ್ತು ಪಕ್ಷದ ಮಟ್ಟದಲ್ಲಿ ವ್ಯಾಪಕ ಸಿದ್ಧತೆ ನಡೆದಿದ್ದು, ಕಾರ್ಯಕ್ರಮದಲ್ಲಿ ೧೦ ಸಾವಿರಕ್ಕೂ ಹೆಚ್ಚು ಜನರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್
