
ಬೆಂಗಳೂರು, 15 ಡಿಸೆಂಬರ್(ಹಿ.ಸ):
ಆ್ಯಂಕರ್ :
ಕರ್ನಾಟಕದ ಬಹುತೇಕ ಕಡೆ ಚಳಿ ಮುಂದುವರೆದಿದ್ದು, ಇದರ ಮಧ್ಯೆ ಭಾನುವಾರದಿಂದ ಎರಡು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ವಿಜಯಪುರದಲ್ಲಿ 11.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ಜತೆ ಮೋಡವೂ ಕೂಡ ಇದೆ, ಇದರ ನಡುವೆ ಸೂರ್ಯ ಕೊಂಚ ಇಣುಕಿದ್ದಾನೆ.
ಎಚ್ಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್
