ಚಿಕ್ಕಮಗಳೂರು, 17 ಡಿಸೆಂಬರ್(ಹಿ.ಸ):
ಆ್ಯಂಕರ್ :
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವ ಬಗ್ಗೆ ರಾಜಕೀಯ ವಲಯದಲ್ಲಿ ಜಟಾಪಟಿ ನಡೆಯುತ್ತಿದೆ. ಕಾಂಗ್ರೆಸ್ ಟಿಪ್ಪು ಹೆಸರಿನ ಮೇಲೆ ಒಲವು ತೋರಿಸಿದ್ದು ಬಿಜೆಪಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡುವಂತೆ ಒತ್ತಾಯಿಸಿದೆ. ಇದರ ನಡುವೆ ಚಿಕ್ಕಮಗಳೂರಿನಲ್ಲಿ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು ಅಬ್ಬಯ್ಯ ಅವರೇ ನಿಮ್ಮ ಮನೆಗೆ ಬೇಕಾದ್ರೆ ಟಿಪ್ಪು ಹೆಸರು ಇಟ್ಟುಕೊಳ್ಳಿ, ನಾವು ನಿಮ್ಮ ಊರಿನ ಬೀದಿಗೂ ಟಿಪ್ಪು ಸುಲ್ತಾನ್ ಹೆಸರಿಡಲು ಬಿಡುವುದಿಲ್ಲ ಎಂದು ಪ್ರಸಾದ್ ಅಬ್ಬಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಕರ್ನಾಟಕದ ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ವಿಜಯಪುರ ಸೇರಿದಂತೆ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆಗ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವಂತೆ ಹುಬ್ಬಳ್ಳಿ-ಧಾರವಾಡ ಪೂರ್ವ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ಅವರು ಒತ್ತಾಯಿಸಿದ್ದರು. ಇದೇ ವಿಚಾರವಾಗಿ ಇಂದು ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಅವರು ಪ್ರಸಾದ್ ಅಬ್ಬಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಬ್ಬಯ್ಯ ಅವರೇ… ನಿಮ್ಮ ಮನೆಗೆ ಬೇಕಾದ್ರೆ ಟಿಪ್ಪು ಹೆಸರು ಇಟ್ಟುಕೊಳ್ಳಿ. ನಿಮ್ಮ ಊರಿನ ಬೀದಿಗೂ ಟಿಪ್ಪು ಹೆಸರಿಡಲು ಬಿಡಲ್ಲ. ಕಾಂಗ್ರೆಸ್ಸಿಗರಿಗೆ ಅಷ್ಟು ಅಭಿಮಾನ ಇದ್ದರೆ ನಿಮ್ಮ ಕಚೇರಿಗೆ ಇಟ್ಟುಕೊಳ್ಳಿ. ನಾವ್ಯಾರು ಬೇಡ ಅಂತ ಹೇಳಲ್ಲ. ಮೈಸೂರು ವಿಮಾನ ನಿಲ್ದಾಣಕ್ಕೆ ಸೂಕ್ತ ಹೆಸರು ನಾಲ್ವಾಡಿ ಕೃಷ್ಣರಾಜ ಒಡೆಯರ್ ಹೆಸರು. ಮಡಿಕೇರಿ ಜನರಿಗೆ ಕೇಳಿ ಟಿಪ್ಪು ಏನು ಮಾಡಿದ್ದಾನೆ ಹೇಳುತ್ತಾರೆ. ಟಿಪ್ಪು ಹೆಸರಿಡಲು ನಾವು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
