
ಬೆಂಗಳೂರು, 20 ಡಿಸೆಂಬರ್(ಹಿ.ಸ):
ಆ್ಯಂಕರ್ :ರಾಜ್ಯದಲ್ಲಿ ಮಳೆ ಕಡಿಮೆಯಾಗಿ ಚಳಿಯ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದೆ . ಸದ್ಯ ಮುಂದಿನ ಐದು ದಿನಗಳ ಕಾಲ ಬೆಂಗಳೂರು, ಕರಾವಳಿ ಭಾಗದ ಜಿಲ್ಲೆಗಳು, ಉತ್ತರ ಕರ್ನಾಟಕದ ಯಾವ ಭಾಗದಲ್ಲೂ ಮಳೆ ಆಗುವ ಸಾಧ್ಯತೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ .
ಬೆಂಗಳೂರಿನಲ್ಲಿ ಇನ್ನೂ ಕೆಲವು ದಿನ ಚಳಿಯ ವಾತಾವರಣ ಮುಂದುವರೆಯಲಿದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬೀದರ್ನಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ಹಿಂದೂಸ್ತಾನ್ ಸಮಾಚಾರ್
