ಗನ್ಸು, 20 ಡಿಸೆಂಬರ್(ಹಿ.ಸ):
ಆ್ಯಂಕರ್ :
ಚೀನಾದಲ್ಲಿ ಸಂಭವಿಸಿದ ಭಾರೀ ಭೂಕಂಪದಿಂದ ಗನ್ಸು ಮತ್ತು ಕಿಂಗ್ಹೈ ಪ್ರಾಂತ್ಯಗಳಲ್ಲಿ ಮೃತರ ಸಂಖ್ಯೆ ೧೨೭ ಕ್ಕೆ ಏರಿದೆ. ಸೋಮವಾರ ರಾತ್ರಿ ಎರಡು ವಾಯುವ್ಯ ಪ್ರಾಂತ್ಯಗಳಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ ೬.೨ ರಷ್ಟಿತ್ತು. ಸ್ಥಳೀಯರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ. ದೇಶದ ದೂರದ ಹಳ್ಳಿಗಳಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು ರಕ್ಷಣಾ ಸಿಬ್ಬಂದಿ ಕುಸಿದ ಮನೆಗಳ ಅವಶೇಷಗಳ ಅಡಿಯಿಂದ ಅಗೆಯುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್
