ಕಲಬುರಗಿ, 21 ಡಿಸೆಂಬರ್(ಹಿ.ಸ):
ಆ್ಯಂಕರ್ :
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪು ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಸಂತೋಷ್ (40), ಶಂಕರ್ (55), ಸಿದ್ದಮ್ಮ (50), ಹುಚ್ಚಪ್ಪ (5) ಮೃತ ದುರ್ದೈವಿಗಳಾಗಿದ್ದಾರೆ. ಮೃತರೆಲ್ಲಾರು ಅಫಜಲಪುರ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪೂಜಾ ದೊಡ್ಡಮನಿ (30) ಪ್ರಾಣಾಪಾಯದಿಂದ ಪಾರಾಗಿದ್ದು, ಲಬುರಗಿ ಖಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಫಜಲಪುರ ಕಡೆಯಿಂದ ಮಲ್ಲಾಬಾದ್ ಕಡೆ ಹೊರಟಿದ್ದ ಕಮಾಂಡೋ ಜೀಪ್ ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದು ಜೀಪ್ನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
