
ಬೆಳಗಾವಿ, 22 ಡಿಸೆಂಬರ್(ಹಿ.ಸ):
ಆ್ಯಂಕರ್ :
ವರ್ಷಾಂತ್ಯದ ಬಹುದೊಡ್ಡ ಸಂಭ್ರಮದ ಕ್ರಿಸ್ಮಸ್ ಆಚರಣೆಗೆ ಕುಂದಾನಗರಿ ಬೆಳಗಾವಿ ಸಜ್ಜುಗೊಂಡಿದೆ. ಕ್ರೈಸ್ತರ ಮನೆಗಳ ಮುಂದೆ ನಕ್ಷತ್ರ ಬುಟ್ಟಿಗಳು ಗಮನ ಸೆಳೆಯುತ್ತಿವೆ. ಬಾಲಯೇಸುವಿಗಾಗಿ ಪುಟ್ಟ ಗೋದಲಿಸಿದ್ಧಗೊಳ್ಳುತ್ತಿದೆ. ಮನೆಯೊಳಗೆ ಕೇಕ್ ತಯಾರಿಗೆ ಭರದ ಸಿದ್ಧತೆ ನಡೆದಿದೆ. ಕ್ರಿಸ್ಮಸ್ ಟ್ರಿ ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸುತ್ತಿವೆ.
ಕ್ರಿಸ್ಮಸ್ ಆಚರಣೆಗೆ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಚರ್ಚಗಳು ಹಾಗೂ ಕ್ರೈಸ್ತರ ಮನೆಗಳಲ್ಲಿ ಸಿದ್ಧತೆ ನಡೆದಿವೆ. ಡಿ.25 (ಸೋಮವಾರ) ಕ್ರಿಸ್ಮಸ್ ಹಬ್ಬದ ಆಚರಣೆ ನಡೆಯಲಿದ್ದರೂ ಡಿ.24ರ (ಭಾನುವಾರ) ರಾತ್ರಿಯಿಂದಲೇ ಚರ್ಚೆಗಳಲ್ಲಿ ವಿಶೇಷ ಕಾರ್ಯಕ್ರಮಗಳು ಆರಂಭಗೊಳ್ಳುತ್ತವೆ. ಮಧ್ಯರಾತ್ರಿಯೇ ವಿಶೇಷ ಸಾಮೂಹಿಕ ಪ್ರಾರ್ಥನೆ ನೆರವೇರಲಿವೆ. ಹಬ್ಬದ ಹಿನ್ನೆಲೆಯಲ್ಲಿ ಬಿಷಪ್ ಅವರಿಂದ ಸಂದೇಶವಿರುತ್ತದೆ.
ಹಿಂದೂಸ್ತಾನ್ ಸಮಾಚಾರ್
