ಬೆಂಗಳೂರು, 22 ಡಿಸೆಂಬರ್(ಹಿ.ಸ):
ಆ್ಯಂಕರ್ :
ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾ ಇಂದಿನಿಂದ ಸಾವಿರಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಬೆಳಗ್ಗೆಯಿಂದಲೇ ಸಲಾರ್ ಅಭಿಮಾನಿಗಳು ಚಿತ್ರವನ್ನು ನೋಡಲು ಸಾಲುಗಟ್ಟಿ ನಿಂತಿದ್ದಾರೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಸಲಾರ್ ಸಿನಿಮಾ ರಿಲೀಸ್ ಆಗಿದೆ.
ಸಲಾರ್ ಸಿನಿಮಾದಲ್ಲಿ ಯಶ್ ನಟಿಸಿದ್ದಾರೆ ಎಂದೆಲ್ಲ ಸುದ್ದಿ ಹರಿಬಿಡಲಾಗಿತ್ತು. ಕೆಜಿಎಫ್ ಸಿನಿಮಾದ ಪಾತ್ರವೊಂದು ಸಲಾರ್ ನಲ್ಲಿ ಎಂಟ್ರಿ ಕೊಡಲಾಗಿದೆ. ಅದು ಯಶ್ ಪಾತ್ರವಾಗಿದೆ ಎಂದು ಹೇಳಲಾಗಿತ್ತು. ಅದಕ್ಕೀಗ ಸ್ಪಷ್ಟನೆ ನೀಡಿದ್ದಾರೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ . ಸಲಾರ್ ಸಿನಿಮಾದಲ್ಲಿ ಯಶ್ ಇದ್ದಾರೆ ಅಂತ ಹೇಳೋಕೆ ನನಗೇಕೆ ಅಳುಕು. ಅವರು ಇದ್ದಾರೆ ಅಂದಿದ್ದರೆ, ಅದನ್ನೂ ಪ್ರಚಾರ ಮಾಡುತ್ತಿದ್ದೆವು. ಪ್ರಚಾರಕ್ಕೆ ಅದು ಪ್ಲಸ್ ಆಗಿರೋದು. ಆದರೆ, ಈ ಸಿನಿಮಾದಲ್ಲಿ ಅವರು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
