ಬೆಂಗಳೂರು, 23 ಡಿಸೆಂಬರ್(ಹಿ.ಸ):
ಆ್ಯಂಕರ್ :
ಇಂದು (ಶನಿವಾರ) ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ. ಈ ಹಬ್ಬವನ್ನು ಬೆಂಗಳೂರಿಗರು ಪ್ರತಿವರ್ಷ ಸಡಗರದಿಂದ ಆಚಾರಿಸುತ್ತಾರೆ. ಈ ವರ್ಷ ಕೂಡ ಅದ್ದೂರಿಯಾಗಿ ವೈಕುಂಠ ಏಕಾದಶಿಯನ್ನು ಬರ ಮಾಡಿಕೊಳ್ಳಲಾಗುತ್ತಿದ್ದು, ನಗರದ ದೇವಸ್ಥಾನಗಳಲ್ಲಿ ಶುಕ್ರವಾರವೇ ಹಬ್ಬದ ವಾತಾವರಣ ಮನೆಮಾಡಿತ್ತು.
ಮಲ್ಲೇಶ್ವರದ ಟಿಟಿಡಿ ದೇವಸ್ಥಾನದಲ್ಲಂತೂ ಸಂಭ್ರಮ ಮುಗಿಲುಮುಟ್ಟಿದೆ. ವೈಕುಂಠ ಏಕಾದಶಿ ಪ್ರಯುಕ್ತವಾಗಿಯೇ ದೇವಸ್ತಾನದ ಸುತ್ತಲೂ ದಕ್ಷಿಣ ಶೈಲಿಯ ಚಪ್ಪರ ಹಾಕಿ ಹೂವಿನಿಂದ ಅಲಾಂಕಾರ ಮಾಡಲಾಗಿದೆ. ಬೆಳಗ್ಗೆ 6 ಗಂಟೆ ಸುಮಾರಿಗೇ ವೈಕುಂಠನಿಗೆ ವಿಶೇಷ ಪೂಜೆ ಆರಂಭವಾಗಿದೆ. ವೆಂಕಟೇಶ್ವರನಿಗೆ ಪಂಚಾಭಿಷೇಕ ಮಾಡಿ, ಪುಷ್ಪಭಿಷೇಕ ಮಾಡಿ ನಂತರ ವಿಶೇಷ ಅಲಂಕಾರ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.
ದೇಗುಲಕ್ಕೆ ಬಂದ ಭಕ್ತರಿಗೆ ಪ್ರಸಾದ ವಿತರಣೆ ನಡೆಯಲಿದೆ. ದೇವಸ್ಥಾನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇದ್ದು, ನೂಕು ನುಗ್ಗಲಾಗದಂತೆ ದೇವಸ್ಥಾನದ ಸುತ್ತಲೂ ಬ್ಯಾರೀಕೇಟ್ ಅಳವಡಿಸಲಾಗಿದೆ. ಇನ್ನು, ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆ ಮಾಸ್ಕ್ ಹಾಕಿಕೊಂಡು ಭಕ್ತದಿಗಳು ದೇವಸ್ಥಾನಕ್ಕೆ ಬರಲು ದೇವಸ್ಥಾನದ ಆಡಳಿತ ಮಂಡಳಿ ಸೂಚಿಸಿದೆ. ಅಲ್ಲದೇ ಟ್ರಾಫಿಕ್ ಜಾಮ್ ಆಗುವ ಸಾಧ್ಯಾತೆಗಳು ಇರುವುದರಿಂದ ಟ್ರಾಪಿಕ್ ಪೋಲಿಸರನ್ನೂ ನಿಯೋಜನೆ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್
