
ಬೆಂಗಳೂರು, 23 ಡಿಸೆಂಬರ್(ಹಿ.ಸ):
ಆ್ಯಂಕರ್ :ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಮನಾರ್ಹವಾಗಿ ಉಷ್ಣಾಂಶ ಇಳಿಕೆ ಕಂಡಿದೆ . ಹೀಗಾಗಿ ರಾಜ್ಯದ ಅನೇಕ ಕಡೆಗಳಲ್ಲಿ ಮಂಜು ಕವಿದ ವಾತಾವರಣೆ ಚಳಿ ಹೆಚ್ಚಾಗಿದೆ. ಇನ್ನು ಮಧ್ಯಾಹ್ನದ ನಂತರ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 10.4 ಡಿ.ಸೆ. ಬೀದರ್ನಲ್ಲಿ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ವಿಜಯಪುರದಲ್ಲಿ 12.1 ಡಿಗ್ರಿ, ರಾಯಚೂರಿಯಲ್ಲಿ 13.8 ಡಿಗ್ರಿ. ಧಾರವಾಡದಲ್ಲಿ 15 ಡಿಗ್ರಿ, ಬಾಗಲಕೋಟೆಯಲ್ಲಿ 15.3 ಡಿಗ್ರಿ, ಕಲಬುರಗಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.6 ಡಿಗ್ರಿ, ಗದಗದಲ್ಲಿ 15.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ನಿನ್ನೆ ಇತ್ತು.
ಕೊಪ್ಪಳದಲ್ಲಿ 16.6 ಡಿಗ್ರಿ, ಹಾವೇರಿಯಲ್ಲಿ 16.8 ಡಿಗ್ರಿ ಸೆಲ್ಸಿಯಸ್, ಬೆಳಗಾವಿ ನಗರದಲ್ಲಿ 18.5 ಡಿಗ್ರಿ ಸೆಲ್ಸಿಯಸ್ನಷ್ಟು ಕನಿಷ್ಠ ಉಷ್ಣಾಂಶವು ಕಂಡು ಬಂದಿತು. ದಕ್ಷಿಣ ಒಳನಾಡಿನ ಭಾಗದಲ್ಲೂ ಚಳಿಯ ವಾತಾವರಣವಿತ್ತು. ಚಿಕ್ಕಮಗಳೂರಿನಲ್ಲಿ 14.2 ಡಿಗ್ರಿ, ಚಿಂತಾಮಣಿಯಲ್ಲಿ 16.4 ಡಿಗ್ರಿ, ದಾವಣಗೆರೆಯಲ್ಲಿ 16.5 ಡಿಗ್ರಿ ಸೆಲ್ಸಿಯಸ್, ಹಾಸನ ಹಾಗೂ ಮೈಸೂರಿನಲ್ಲಿ 17 ಡಿಗ್ರಿ, ಮಂಡ್ಯದಲ್ಲಿ 17.1 ಡಿಗ್ರಿ, ಚಾಮರಾಜನಗರದಲ್ಲಿ 17.3 ಡಿಗ್ರಿ, ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ 17.5 ಡಿಗ್ರಿ ಸೆಲ್ಸಿಯಸ್ನಷ್ಟು ಕನಿಷ್ಠ ಉಷ್ಣಾಂಶ ಕಂಡು ಬಂದಿತು.
ಹಿಂದೂಸ್ತಾನ್ ಸಮಾಚಾರ್
