
ನವದೆಹಲಿ, 25 ಡಿಸೆಂಬರ್(ಹಿ.ಸ):
ಆ್ಯಂಕರ್ :
ಶಿಕ್ಷಣ ತಜ್ಞ ಪಂಡಿತ್ ಮದನ್ಮೋಹನ್ ಮಾಳವೀಯ ಅವರ ಜನ್ಮದಿನದ ಅಂಗವಾಗಿ ನವದೆಹಲಿಯಲ್ಲಿಂದು ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ, ಮದನ್ಮೋಹನ್ ಅವರ ಕೃತಿಗಳ ಸಂಗ್ರಹವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದಾರೆ. ಈ ಪುಸ್ತಕವನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರಸಾರಾಂಗ ನಿರ್ದೇಶನಾಲಯ ಪ್ರಕಟಿಸಿದೆ. ಈ ಸಂದರ್ಭದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಮತ್ತಿತರರು ಉಪಸ್ಥಿತರಿರಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
