ಬೆಂಗಳೂರು, 26 ಡಿಸೆಂಬರ್(ಹಿ.ಸ):
ಆ್ಯಂಕರ್ :
ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ನೀಡುವ ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಡಿ.26ರ ಮಂಗಳವಾರದಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬೆಳಗ್ಗೆ 11 ಗಂಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ.
ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಯುವನಿಧಿ ಯೋಜನೆಯ ಪೋಸ್ಟರ್ ಅನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಲೋಗೋವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಅನಾವರಣಗೊಳಿಸಲಿದ್ದಾರೆ. ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳುವರು.
ಹಿಂದೂಸ್ತಾನ್ ಸಮಾಚಾರ್
