
ಬೆಂಗಳೂರು, 27 ಡಿಸೆಂಬರ್(ಹಿ.ಸ):
ಆ್ಯಂಕರ್ :
ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ತಲುಪಿಸುವ ಉದ್ದೇಶದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕರ್ನಾಟಕದಲ್ಲಿ ಯಶಸ್ವಿಯಾಗಿ ಮುಂದುವರಿದಿದೆ. ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕಮಗಳೂರು, ಗದಗ, ವಿಜಯಪುರ, ಯಾದಗಿರಿ, ಬೆಳಗಾವಿ, ಬಳ್ಳಾರಿ ಸೇರಿದಂತೆ ಹಲವೆಡೆ ನಡೆಯಿತು. ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಎಲ್ಇಡಿ ಪರದೆ ಮೂಲಕ ಮಾಹಿತಿ ನೀಡಲಾಯಿತು. ಸ್ಥಳದಲ್ಲಿಯೇ ಯೋಜನೆಗಳ ನೋಂದಣಿಗೆ ಅವಕಾಶ ಕಲ್ಪಿಸಲಾಗಿತ್ತು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಪರಗೋಡು ಗ್ರಾಮದಲ್ಲಿ ನಡೆದ ಈ ಯಾತ್ರೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸ್ಥಳೀಯರಿಗೆ ವಿವರಿಸಲಾಯಿತು. ಫಲಾನುಭವಿ ಮಲ್ಲೇಶ್ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಅಟಲ್ ಪಿಂಚಣಿ ಯೋಜನೆಯು ತಮ್ಮ ಇಳಿವಯಸ್ಸಿಗೆ ಭದ್ರತೆ ನೀಡಲಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್
