
ಮಂಗಳೂರು, 29 ಡಿಸೆಂಬರ್(ಹಿ.ಸ):
ಆ್ಯಂಕರ್ :
ಮಂಗಳೂರು ಹಾಗೂ ಗೋವಾದ ಮಡಗಾಂವ್ ಮಧ್ಯೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಡಿಸೆಂಬರ್ 30ರಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಈಗಾಗಲೇ ನಡೆದಿದ್ದು, ಯಶಸ್ವಿಯಾಗಿದೆ. ರೈಲಿನ ಆರಂಭಿಕ ಸಂಚಾರಕ್ಕೆ ದಕ್ಷಿಣ ರೈಲ್ವೆ ವಲಯವು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್ 30 ರಂದು ಮಂಗಳೂರು ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ಸೇರಿದಂತೆ 6 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ.
ಮಂಗಳೂರು ಮಡಗಾಂವ್ ರೈಲು 320 ಕಿಮೀ ಓಡಾಟ ಮಾಡಿದ್ದು, ಯಾವುದೇ ಸಮಸ್ಯೆಗಳು ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರು ಮಡಗಾಂವ್ ಸಂಚಾರದ ನಡುವೆ ಉಡುಪಿ ಮತ್ತು ಕಾರವಾರದಲ್ಲಿ ಎರಡು ನಿಲುಗಡೆಗಳು ಇರಲಿವೆ.
ಹಿಂದೂಸ್ತಾನ್ ಸಮಾಚಾರ್
