ಅಯೋಧ್ಯೆ 30 ಡಿಸೆಂಬರ್(ಹಿ.ಸ):
ಆ್ಯಂಕರ್ : ಎರಡು ಅಮೃತ್ ಭಾರತ್ ರೈಲುಗಳು ಹಾಗೂ 6 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಅಯೋಧ್ಯೆಯ ಅಯೋಧ್ಯಾ ಧಾಮ್ ರೈಲು ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ನೂತನ ರೈಲುಗಳಿಗೆ ಚಾಲನೆ ನೀಡಿದರು. ಅಯೋಧ್ಯೆ ಮಾತ್ರವಲ್ಲದೆ, ದೇಶದ ಇತರೆಡೆಗಳ ವಂದೇ ಭಾರತ್ ರೈಲುಗಳಿಗೂ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಇದರಲ್ಲಿ ಕರ್ನಾಟಕದ ಮಂಗಳೂರಿನಿಂದ ಗೋವಾಕ್ಕೆ ತೆರಳುವ, ಬೆಂಗಳೂರಿನಿಂದ ಕೊಯಮತ್ತೂರಿಗೆ ತೆರಳುವ ವಂದೇ ಭಾರತ್ ರೈಲುಗಳು ಮತ್ತು ಮಾಲ್ಡಾ ಬೆಂಗಳೂರು ಅಮೃತ್ ಭಾರತ್ ಎಕ್ಸ್ಪ್ರೆಸ್ ಕೂಡ ಸೇರಿವೆ.
ಯಾವೆಲ್ಲ ವಂದೇ ಭಾರತ್ ರೈಲುಗಳಿಗೆ ಚಾಲನೆ?
ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ – ನವದೆಹಲಿ ವಂದೇ ಭಾರತ್ ಎಕ್ಸ್ಪ್ರೆಸ್ ಸೇರಿದಂತೆ ಆರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಾಯಿತು. ಉಳಿದವುಗಳೆಂದರೆ, ಅಮೃತಸರ – ದೆಹಲಿ ವಂದೇ ಭಾರತ್ ಎಕ್ಸ್ಪ್ರೆಸ್, ಕೊಯಮತ್ತೂರು-ಬೆಂಗಳೂರು ಕಂಟೋನ್ಮೆಂಟ್ ವಂದೇ ಭಾರತ್ ಎಕ್ಸ್ಪ್ರೆಸ್, ಮಂಗಳೂರು – ಮಡ್ಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್, ಜಲ್ನಾ – ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಮತ್ತು ಅಯೋಧ್ಯೆ – ಆನಂದ್ ವಿಹಾರ್ ಟರ್ಮಿನಲ್ ವಂದೇ ಭಾರತ್ ಎಕ್ಸ್ಪ್ರೆಸ್ ಆಗಿವೆ.
ಹಿಂದೂಸ್ತಾನ್ ಸಮಾಚಾರ್
