ಚಿಕ್ಕೋಡಿ, 31 ಡಿಸೆಂಬರ್(ಹಿ.ಸ):
ಆ್ಯಂಕರ್ :
ಹಿಂದೆ ಮುಸ್ಲಿಮರು ದೇವಸ್ಥಾನ ಒಡೆದು ಮಸೀದಿ ನಿರ್ಮಿಸಿದ್ದಾರೆ. ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ. ಇಲ್ಲವಾದರೆ ಹಿಂದೂ ಸಮಾಜ ಮಸೀದಿಗಳನ್ನು ಒಡೆದು ಹಾಕುತ್ತೆ ಎಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಶ್ರೀ ರಾಮಸೇನೆಯಿಂದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಹಿಜಾಬ್ ಧರಿಸಿ ಬಂದರೇ ಹಿಂದೂ ಸಮಾಜದ ವಿದ್ಯಾರ್ಥಿಗಳು ಕೇಸರಿ ಶಾಲ್ ಧರಿಸಿ ಎಚ್ಚರಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಕೋರ್ಟ್ ಆದೇಶ ತಿರಸ್ಕರಿಸಿ ಹಿಜಾಬ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ ಸೂರ್ಯ ಇದ್ದ ಹಾಗೆ, ನಾಯಿಗಳು ಬೊಗಳುತ್ತಿರುತ್ತವೆ. ಪ್ರಿಯಾಂಕ್ ಖರ್ಗೆ ಎಂಬ ರಾಜಕಾರಣಿ ಮೋದಿ ಬಗ್ಗೆ ಟೀಕೆ ಮಾಡ್ತಾರೆ. ಸೂರ್ಯನಿಗೆ ಊಗಿದರೇ ಉಗಿದಿದ್ದು ಪ್ರಿಯಾಂಕಾ ಖರ್ಗೆ ಅವರಿಗೆ ಮರಳಿ ಬರುತ್ತದೆ ಎಂದು ಹೇಳಿದ್ದಾರೆ.
ಪಾಕಿಸ್ತಾನ ಸೇರಿ ಅಖಂಡ ಭಾರತ ನಿರ್ಮಾಣಕ್ಕೆ ಜೈ ಶ್ರೀರಾಮ ಘೋಷಣೆ ದೇಶದಲ್ಲಿ ಮತ್ತೆ ಕೇಳಿ ಬರುತ್ತಿದೆ. ಪಾಕಿಸ್ತಾನ ದೇಶದವರು ಮೋದಿ ಪ್ರಧಾನಿ ಆಗಿ ಬರಲಿ ಎಂದು ಬಯಸುತ್ತಿದ್ದಾರೆ. ಮೋದಿ ಭಾರತೀಯ ಸಂಸ್ಕೃತಿಯನ್ನ ವಿಶ್ವಕ್ಕೆ ಸಾರಿದರು. ದೇಶವನ್ನ ಲೂಟಿ ಮಾಡಿದವರಿಗೆ ಭಾರತೀಯ ಸಂಸ್ಕೃತಿ ನಾಶ ಮಾಡಲು ಆಗಲಿಲ್ಲ. ಕಾಂಗ್ರೆಸ್ ಅವರ ಅಧಿಕಾರದ ಆಸೆಯಿಂದ ದೇಶ ತುಂಡು ತುಂಡಾಯಿತು ಎಂದು ಹರಿಹಾಯ್ದರು.
ಹಿಂದೂಸ್ತಾನ್ ಸಮಾಚಾರ್
