ರಾಯಚೂರು, 1 ಜನವರಿ(ಹಿ.ಸ):
ಆ್ಯಂಕರ್ : ಅಡುಗೆ ಅನಿಲ ಗ್ರಾಹಕರು ತಮ್ಮ ಏಜೆನ್ಸಿಗೆ ತೆರಳಿ ಇ-ಕೆವೈಸಿ ನೀಡಬಹುದಾಗಿದೆ. ಅದು ಸಹ ಉಚಿತವಾಗಿ ನೀಡಬಹುದು. ಆದರೆ, ಕೇಂದ್ರ ಸರ್ಕಾರವು ಯಾವುದೇ ಕೊನೆಯ ದಿನಾಂಕವನ್ನು ನಿಗದಿಪಡಿಸಿರುವುದಿಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಗ್ಯಾಸ್ ಏಜೆನ್ಸಿಗಳಿಗೆ ದಿನಾಂಕ 31-12-2023ರ ಒಳಗಾಗಿ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಮತ್ತು ಇ-ಕೆವೈಸಿ ಕಾರ್ಯಾಕ್ಕೆ ಹಣ ನೀಡಬೇಕೆಂಬ ವದಂತಿಯು ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿದೆ. ಈ ವಿಷಯವು ಕೇವಲ ವದಂತಿಯಾಗಿದೆ ಎಂದು ಅವರು ಸ್ಪಷ್ಠೀಕರಣ ನೀಡಿದ್ದಾರೆ.
ಉಜ್ವಲ ಯೋಜನೆಯ ಗ್ಯಾಸ್ ಸಂಪರ್ಕ ಪಡೆದಿರುವವರು ಇ-ಕೆವೈಸಿ ಮೊದಲು ಆದ್ಯತೆಯಾಗಿ ನೀಡಬೇಕಾಗಿದೆ. ಉಳಿದಂತೆ ಗ್ಯಾಸ್ ಸಂಪರ್ಕ ಹೊಂದಿರುವವರು ಆಧಾರ್ ಸಂಖ್ಯೆ ದಾಖಲೆಯೊಂದಿಗೆ ಸಂಬಂಧಿಸಿದ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ ಇ-ಕೆವೈಸಿ ನೀಡಬಹುದಾಗಿದೆ ಎಂದು ಆಹಾರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
