ದೆಹಲಿ, 4 ಜನವರಿ(ಹಿ.ಸ):
ಆ್ಯಂಕರ್ :ದೆಹಲಿ ಸಿಎಂ ಅರವಿಂದ್ ಕೇಜ್ರೀವಾಲ್ ಅವರು ಮೂರನೇ ಬಾರಿಯೂ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಗೈರಾಗಿರುವ ಹಿನ್ನೆಲೆಯಲ್ಲಿ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿ ಅವರನ್ನು ಬಂಧಿಸಬಹುದು ಎಂದು ಎಎಪಿ ನಾಯಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಬಕಾರಿ ಹಗರಣದಲ್ಲಿ ವಿಚಾರಣೆಗೆ ಬರುವಂತೆ ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ಅವರಿಗೆ ಒಟ್ಟು ಮೂರು ಬಾರಿ ನೋಟೀಸ್ ಕಳುಹಿಸಿತ್ತು. ಈ ನೋಟಿಸ್ಗೆ ಅರವಿಂದ್ ಕೇಜ್ರಿವಾಲ್ ಲಿಖಿತ ಉತ್ತರ ಕಳುಹಿಸಿದ್ದರು. ಆದರೆ ವಿಚಾರಣೆಗೆ ಹಾಜರಾಗಿರಲಿಲ್ಲ. ಆದರೆ ಈಗ 3ನೇ ಬಾರಿಯೂ ಗೈರಾದ ಹಿನ್ನೆಲೆಯಲ್ಲಿ ಅವರ ನಿವಾಸದ ಮೇಲೆ ದಾಳಿ ನಡೆಯಬಹುದು. ಅವರನ್ನು ಬಂಧಿಸಬಹುದು ಎಂದು ಎಎಪಿ ನಾಯಕರಾದ ಅತಿಶಿ, ಸೌರಭ್ ಭಾರದ್ವಾಜ್, ಜಾಸ್ಮೀನ್ ಶಾ ಮುಂತಾದವರು ಅನುಮಾನ ವ್ಯಕ್ತಪಡಿಸಿದ್ದಾರೆ.
ಇಂದು ಮುಂಜಾನೆ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಬಹುದು. ಅವರ ನಿವಾಸದ ಮೇಲೆ ದಾಳಿ ನಡೆಯಬಹುದು ಎಂದು ಕೆಲ ಎಎಪಿ ನಾಯಕರು ಟ್ವಿಟ್ ಮಾಡಿದ್ದಾರೆ. ಎಎಪಿ ನಾಯಕಿ ಅತಿಶಿ ಟ್ವಿಟ್ ಮಾಡಿದ್ದು, ಇಡಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ಮುಂಜಾನೆ ದಾಳಿ ಮಾಡಿ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನುವ ಸುದ್ದಿಗಳು ಬರುತ್ತಿವೆ ಎಂದು ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
