ಜೈಪುರ್, 5 ಜನವರಿ(ಹಿ.ಸ):
ಆ್ಯಂಕರ್ :
ಎಲ್ಲ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರ ಮೂರು ದಿನಗಳ ಸಮ್ಮೇಳನ ಇಂದು ಜೈಪುರದಲ್ಲಿ ಆರಂಭವಾಗಲಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ಮತ್ತು ನಾಡಿದ್ದು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಮೂರು ದಿನಗಳ ಸಮ್ಮೇಳನದಲ್ಲಿ ಆಂತರಿಕ ಭದ್ರತೆ, ಸೈಬರ್ ಅಪರಾಧ ತಡೆ, ಆಧುನಿಕ ತಂತ್ರಜ್ಞಾನ ಜೊತೆಗೆ ಭಯೋತ್ಪಾದನೆಯ ನಿಗ್ರಹಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳು, ಜೈಲುಗಳ ಸುಧಾರಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಯಲಿದೆ.
ಭದ್ರತಾ ವಿಷಯದಲ್ಲಿ ತೆಗೆದುಕೊಳ್ಳಬೇಕಾದ ಕ್ರಮ ಹಾಗೂ ನೂತನ ತಂತ್ರಜ್ಞಾನ ಅಳವಡಿಕೆ ಬಗ್ಗೆ ತಜ್ಞರು ಉನ್ನತಾಧಿಕಾರಿಗಳಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಪರ್ಯಾಯ ಸೂತ್ರವನ್ನು ಪ್ರಕಟಿಸುವ ಸಾಧ್ಯತೆ ಇದೆ.
ಸಮ್ಮೇಳನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತೆ ಸಲಹೆಗಾರ, ಗೃಹ ಖಾತೆಯ ರಾಜ್ಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
