ಬೆಂಗಳೂರು, 6 ಜನವರಿ(ಹಿ.ಸ):
ಆ್ಯಂಕರ್ :ಕರ್ನಾಟಕ ಚಿತ್ರಕಲಾ ಪರಿಷತ್ತಿನ 21ನೇ ಚಿತ್ರಸಂತೆ ನಾಳೆ(ಜ.7ರಂದು) ಕೃಮಾರಕೃಪ ರಸ್ತೆಯಲ್ಲಿ ಚಿತ್ರಸಂತೆ ಆಯೋಜನೆ ಮಾಡಲಾಗಿದ್ದು, ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ನಡೆಯಲಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ 1,500 ವೃತ್ತಿಪರ ಮತ್ತು ಹವ್ಯಾಸಿ ಕಲಾವಿದರ ಸಾವಿರಾರು ಚಿತ್ರಕಲೆಗಳು ಪ್ರದರ್ಶನಗೊಳ್ಳಲಿವೆ.
ಚಿತ್ರಸಂತೆಯನ್ನ ವೀಕ್ಷಿಸಲು ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕು ಆಗಮಿಸುವ ಸಾಧ್ಯತೆ ಇರುವ ಹಿನ್ನೆಲೆ ಚಿತ್ರಸಂತೆ ಕಾರ್ಯಕ್ರಮಕ್ಕೆ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿಯಿಂದ ಮೆಟ್ರೋ ಫೀಡರ್ ಬಸ್ ಗಳು ಕಾರ್ಯಾಚರಣೆ ನಡೆಸಲಿವೆ. ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ವಿಶೇಷ ಮೆಟ್ರೋ ಫೀಡರ್ ಬಸ್ ಸೇವೆ ನೀಡಲಿದ್ದು, ಟಿಕೆಟ್ ದರ ರೂ.15.00 ವಿಶೇಷ ದರ (Flat Fare) ಗಳೊಂದಿಗೆ ಮೆಟ್ರೋ ಫೀಡರ್ ಬಸ್ ಕಾರ್ಯಚರಣೆ ನಡೆಸಲಿವೆ.
ಹಿಂದೂಸ್ತಾನ್ ಸಮಾಚಾರ್
