ಹಮೀರ್ಪುರ, 6 ಜನವರಿ(ಹಿ.ಸ):
ಆ್ಯಂಕರ್ :
ಉಪರಾಷ್ಟ್ರಪತಿ ಜಗದೀಪ್ ಧನಕರ್ ಇಂದು ಹಿಮಾಚಲ ಪ್ರದೇಶಕ್ಕೆ ಒಂದು ದಿನದ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು, ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಮತ್ತು ಹಮೀರ್ಪುರದ ಕೆರಿಯರ್ ಪಾಯಿಂಟ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಅಭಿವೃದ್ಧಿ ಹೊಂದಿದ ಭಾರತದಲ್ಲಿ ಯುವಕರ ಪಾತ್ರ @ ೨೦೪೭’ ವಿಷಯದ ಎರಡು ಸಾವಿರದ ನಲವತ್ತೇಳು ಕುರಿತು ಸಂವಾದ ನಡೆಸಲಿದ್ದಾರೆ. ರಾಜ್ಯಪಾಲ ಶಿವಪ್ರತಾಪ್ ಶುಕ್ಲಾ, ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಶಿಕ್ಷಣವನ್ನು ಹೆಚ್ಚಿಸುವ ೫೦೦ನೇ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಉಪರಾಷ್ಟ್ರಪತಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
