ಕೋಲಾರ, 8 ಜನವರಿ(ಹಿ.ಸ):
ಆ್ಯಂಕರ್ :
ಕೋಲಾರದಲ್ಲಿ ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಶಾಸಕರ ಮನೆ ಮೇಲೆ ದಾಳಿ ಮಾಡಿರುವ ಇ.ಡಿ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಕೊಮ್ಮನಹಳ್ಳಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದಾರೆ. ಜೊತೆಗೆ ಶಾಸಕರಿಗೆ ಸೇರಿದ ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಾಲೂರು ಶಾಸಕರಾಗಿರುವ ನಂಜೇಗೌಡರು ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ (ಕೋಚಿಮುಲ್) ಅಧ್ಯಕ್ಷರಾಗಿದ್ದಾರೆ. ಇವರ ವಿರುದ್ಧ ಇತ್ತೀಚೆಗೆ ಕೊಚಿಮುಲ್ ನೇಮಕಾತಿ ವಿಚಾರದಲ್ಲಿ ಅವ್ಯವಹಾರ ಆರೋಪ ಕೇಳಿಬಂದಿತ್ತು.
ಹಿಂದೂಸ್ತಾನ್ ಸಮಾಚಾರ್
