ಗಾಂಧಿನಗರ್, 9 ಜನವರಿ(ಹಿ.ಸ):
ಆ್ಯಂಕರ್ :ನಾಳೆಯಿಂದ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ ೨೦೨೪ ಆರಂಭವಾಗಲಿದ್ದು, ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮೂರು ದಿನಗಳ ಭೇಟಿಗಾಗಿ ಗುಜರಾತ್ಗೆ ತಲುಪಿದ್ದಾರೆ.
ಇಂದು ವೈಬ್ರೆಂಟ್ ಗುಜರಾತ್ ಗ್ಲೋಬಲ್ ಟ್ರೇಡ್ ಶೋ ಅನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಪ್ರಧಾನಿ ಅವರು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಪ್ರಧಾನಮಂತ್ರಿಯವರು ನಾಳೆ ಮೂರು ದಿನಗಳ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆಯನ್ನು ಉದ್ಘಾಟಿಸಲಿದ್ದು, ನಂತರ ಉನ್ನತ ಜಾಗತಿಕ ನಿಗಮಗಳ ಸಿಇಒಗಳೊಂದಿಗೆ ಸಭೆ ನಡೆಸಲಿದ್ದಾರೆ.
ಇಂದು ಸಂಜೆ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗಡೆ ನಡೆಯಲಿರುವ ರೋಡ್ ಶೋ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಝಯೇದ್ ಅಲ್ ನಹ್ಯಾನ್ ಉದ್ಘಾಟಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
