ಕೊಪ್ಪಳ, 10 ಜನವರಿ(ಹಿ.ಸ):
ಆ್ಯಂಕರ್: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಮಿನಿ ಜಾಬ್ ಫೇರ್ ಅನ್ನು ಜನವರಿ 12ರಂದು ಗಂಗಾವತಿಯ ಬಸ್ ನಿಲ್ದಾಣದ ಹತ್ತಿರವಿರುವ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮಿನಿ ಜಾಬ್ ಫೇರ್ ನಡೆಯಲಿದೆ. ಜಾಬ್ ಫೇರ್ರ್ನಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿಯುಸಿ ಅಥವಾ ತತ್ಸಮಾನ, ಐಟಿಐ, ಮತ್ತು ಡಿಪೆÇ್ಲೀಮಾ, ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 18 ರಿಂದ 35 ವರ್ಷದ ವರೆಗಿನ ಅರ್ಹ ವಿದ್ಯಾರ್ಹತೆ ಹೊಂದಿದ ಯುವಕ ಮತ್ತು ಯವತಿಯರು, ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ಪೆÇೀರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಈ ಮಿನಿ ಜಾಬ್ ಫೇರ್ನಲ್ಲಿ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಮೊ.ಸಂ; 8105693234ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ
