ಬೆಂಗಳೂರು, 11 ಜನವರಿ(ಹಿ.ಸ):
ಆ್ಯಂಕರ್ :ಎಸ್.ಆರ್.ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ‘ಬ್ಯಾಡ್’ಚಿತ್ರದ ಟ್ರೈಲರ್ ಜನವರಿ 12 ರಂದು ಬಿಡುಗಡೆಯಾಗಲಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಚಿತ್ರದ ಟ್ರೈಲರ್ನ ಲ್ಲಿ ಏನೆಲ್ಲಾ ಇರಬಹುದು? ಎಂಬುದನ್ನು ತಿಳಿಸಲು ಚಿತ್ರತಂಡ ಪ್ರೋಮೊ ಬಿಡುಗಡೆ ಮಾಡಿದೆ.
ಈ ಪ್ರೋಮೊದಲ್ಲಿ ನಿರ್ದೇಶಕರಾದ ಪಿ.ಸಿ.ಶೇಖರ್ ಹಾಗೂ ನಾಯಕರಾದ ನಕುಲ್ ಗೌಡ ಸುಂದರವಾದ ನಿರೂಪಣೆಯಲ್ಲಿ ಚಿತ್ರದ ಟ್ರೈಲರ್ ನ ವೈಶಿಷ್ಟ್ಯತೆ ಹಾಗು ತಾಂತ್ರಿಕ ವಿಭಿನ್ನತೆಯ ಮಾಹಿತಿ ನೀಡಿದ್ದಾರೆ. ಈ ಪ್ರೋಮೊ ನೋಡಿದ ಮೇಲೆ ಚಿತ್ರದ ಬಗ್ಗೆ ಹಾಗೂ ಬಿಡುಗಡೆಯಾಗಲಿರುವ ಟ್ರೈಲರ್ ಬಗ್ಗೆ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದೆ.
ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪಿ.ಸಿ.ಶೇಖರ್ ಸಂಕಲನ, ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿದೆ. ಈ ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ ಸಂಭಾಷಣೆ ಬರೆದಿದ್ದಾರೆ. ಪ್ರೀತಿಯ ರಾಯಭಾರಿ ಚಿತ್ರದ ಮೂಲಕ ಜನರ ಮನಗೆದ್ದಿರುವ ನಕುಲ್ ಗೌಡ (Nakul Gowda) ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಲ್ಲಿ ಆರು ಜನ ಕಲಾವಿದರು ಅಭಿನಯಿಸಿರುವುದು ಈ ಚಿತ್ರದ ವಿಶೇಷ.
ಹಿಂದೂಸ್ತಾನ್ ಸಮಾಚಾರ್
