ಜೈಪುರ,, 11 ಜನವರಿ(ಹಿ.ಸ):
ಆ್ಯಂಕರ್ :
52 ಮಕ್ಕಳಿದ್ದ ಶಾಲಾ ಬಸ್ ಕಲ್ಲಿದ್ದಲು ತುಂಬಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 15 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಸುಮೇರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ 52 ಶಾಲಾ ವಿದ್ಯಾರ್ಥಿಗಳನ್ನು ಹೊತ್ತ ಬಸ್ ಶಿಕಾರ್ಪುರ ಕಡೆಗೆ ತೆರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಕನಿಷ್ಠ 11 ಶಾಲಾ ಮಕ್ಕಳು, ಮೂವರು ಶಿಕ್ಷಕರು ಮತ್ತು ಬಸ್ ಚಾಲಕನನ್ನು ಚಿಕಿತ್ಸೆಗಾಗಿ ಶಿಯೋಗಂಜ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಭೀಕರ ಅಪಘಾತದ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ತಕ್ಷಣ, ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಖಾಸಗಿ ಬಸ್ನ ಮುಂಭಾಗವು ಸಂಪೂರ್ಣವಾಗಿ ಹಾನಿಗೊಳಗಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸುದೀರ್ಘ ಟ್ರಾಫಿಕ್ ಜಾಮ್ ಕೂಡ ಕಂಡುಬಂದಿತ್ತು.
ಹಿಂದೂಸ್ತಾನ್ ಸಮಾಚಾರ್
