ಕಾರಟಗಿ, 12 ಜನವರಿ(ಹಿ.ಸ):
ಆ್ಯಂಕರ್:ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಡಳಿತ ಇಷ್ಟವಾಗಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ 400 ಕ್ಕೂ ಅಧಿಕ ಸ್ಥಾನಗಳಿಸುವ ಮೂಲಕ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ದ. ಇನ್ನು ರಾಜ್ಯದಲ್ಲಿ ಬಿಎಸ್ವೈ, ಬಿವಿವೈ, ಜೋಷಿ, ಬೊಮ್ಮಾಯಿ, ಸದಾನಂದ ಗೌಡ ಸೇರಿ ಹಿರಿಯ ನಾಯಕರ ಮಾರ್ಗದರ್ಶನ, ಸಂಘಟನೆಯಿಂದ ಹಾಗೂ ಜನರ ಆಶೀರ್ವಾದದಿಂದ 28 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಂಸದ ಸಂಗಣ್ಣ ಕರಡಿ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಮರ್ಲಾನಹಳ್ಳಿ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
