ದೆಹಲಿ, 14 ಜನವರಿ(ಹಿ.ಸ):
ಆ್ಯಂಕರ್ :
ರಾಮನೂರಿನಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಾವಿರಾರು ಜನರಿಗೆ ಈಗಾಗಲೇ ಆಹ್ವಾನ ಕಳುಹಿಸಲಾಗಿದೆ. ಹೀಗಾಗಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು, ಇನ್ನೂ ಕೆಲವರು ಭಾಗವಹಿಸಲ್ಲ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾಂಗ್ರೆಸ್ ಹೈಕಮಾಂಡ್ ನಿರಾಕರಿಸಿದೆ. ಇದೀಗ ಅಖಿಲೇಶ್ ಯಾದವ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೋ, ಇಲ್ಲವೋ ಎಂಬ ಪ್ರಶ್ನೆಗೆ ಇದೀಗ ಸ್ವತಃ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.
ಈ ಸಂಬಂಧ ಅಖಿಲೇಶ್ ಅವರು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಪತ್ರವನ್ನು ಬರೆದಿದ್ದಾರೆ. ಇದರಲ್ಲಿ ಕಾರ್ಯಕ್ರಮದ ನಂತರ ಬರುವುದಾಗಿ ಹೇಳಿದ್ದಾರೆ. ಜೊತೆಗೆ ಆಹ್ವಾನ ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಕೂಡ ಅಲ್ಲಿಸಿದ್ದಾರೆ. ಇದರೊಂದಿಗೆ ಈ ಕಾರ್ಯಕ್ರಮವನ್ನು ಸುರಕ್ಷಿತವಾಗಿ ಪೂರ್ಣಗೊಳಿಸಬೇಕು. ಜನವರಿ 22 ರ ಕಾರ್ಯಕ್ರಮದ ಬಳಿಕ ತಮ್ಮ ಕುಟುಂಬದೊಂದಿಗೆ ಅಯೋಧ್ಯೆಗೆ ಭೇಟಿ ನೀಡುವುದಾಗಿಯೂ ಅಖಿಲೇಶ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
