ಇಂದೋರ್, 15 ಜನವರಿ(ಹಿ.ಸ):
ಆ್ಯಂಕರ್ :
ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಕಳೆದ ರಾತ್ರಿ ನಡೆದ ಮೂರು ಪಂದ್ಯಗಳ ಟಿ-೨೦ ಸರಣಿಯ ಪುರುಷರ ಕ್ರಿಕೆಟ್ನ ಎರಡನೇ ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನ ತಂಡವನ್ನು ಆರು ವಿಕೆಟ್ಗಳಿಂದ ಸೋಲಿಸಿತು. ಗೆಲುವಿಗೆ ೧೭೩ ರನ್ಗಳ ಗುರಿ ಬೆನ್ನತ್ತಿದ ಭಾರತ ೧೫.೪ ಓವರ್ ಗಳಲ್ಲಿ ನಾಲ್ಕು ವಿಕೆಟ್ಗಳ ನಷ್ಟಕ್ಕೆ ೧೭೩ ರನ್ ಗಳಿಸಿತು. ಭಾರತದ ಪರ ಯಶಸ್ವಿ ಜೈಸ್ವಾಲ್ ೬೮ ರನ್ ಗಳಿಸಿದರೆ, ಶಿವಂ ದುಬೆ ಅಜೇಯ ೬೩ ರನ್ ಗಳಿಸಿದರು. ಅಫ್ಘಾನಿಸ್ತಾನ ಪರ ಕರೀಂ ಜನತ್ ಎರಡು ವಿಕೆಟ್ ಪಡೆದರೆ, ಫಜಲ್ಹಕ್ ಫಾರೂಕಿ ಮತ್ತು ನವೀನ್ ಉಲ್ ಹಕ್ ತಲಾ ಒಂದು ವಿಕೆಟ್ ಪಡೆದರು. ಇದಕ್ಕೂ ಮುನ್ನ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಬ್ಯಾಟಿಂಗ್ಗೆ ಇಳಿದ ಅಫ್ಘಾನಿಸ್ತಾನ ನಿಗದಿತ ಇಪ್ಪತ್ತು ಓವರ್ಗಳಲ್ಲಿ ೧೭೨ ರನ್ಗಳಿಗೆ ಆಲೌಟ್ ಆಯಿತು. ಅಫ್ಘಾನಿಸ್ತಾನ ಪರ ಗುಲ್ಬದಿನ್ ನೈಬ್ ೫೭ ರನ್ ಗಳಿಸಿ ಅಗ್ರ ಸ್ಕೋರರ್ ಎನಿಸಿಕೊಂಡರು. ತಿಥೇಯರ ಪರ ಅರ್ಷದೀಪ್ ಸಿಂಗ್ ಮೂರು, ರವಿ ಬಿಷ್ಣೋಯ್ ಮತ್ತು ಅಕ್ಷರ್ ಪಟೇಲ್ ತಲಾ ಎರಡು ಮತ್ತು ಶಿವಂ ದುಬೆ ಒಂದು ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಈ ಗೆಲುವಿನೊಂದಿಗೆ ಭಾರತ ಕ್ರಿಕೆಟ್ ತಂಡ ಮೂರು ಪಂದ್ಯಗಳ ಸರಣಿಯಲ್ಲಿ ೨-೦ ಮುನ್ನಡೆ ಸಾಧಿಸಿದೆ. ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ಆರು ವಿಕೆಟ್ಗಳ ಜಯ ಸಾಧಿಸಿತ್ತು. ಮೂರು ಪಂದ್ಯಗಳ ಸರಣಿಯ ಮೂರನೇ ಮತ್ತು ಅಂತಿಮ ಟಿ-೨೦ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಜೆ ಭಾರತೀಯ ಕಾಲಮಾನ ಸಂಜೆ ೭ ಗಂಟೆಗೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್
