
ಬೆಂಗಳೂರು, 19ಜನವರಿ(ಹಿ.ಸ):
ಆ್ಯಂಕರ್ :
ದಕ್ಷಿಣ ಮತ್ತು ನೈಋತ್ಯ ವಲಯದ ಪ್ರಾದೇಶಿಕ ರಾಜಭಾಷಾ ಸಮ್ಮೇಳನ ಇಂದು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ರಾಜಭಾಷಾ ಇಲಾಖೆಯ ಜಂಟಿ ಕಾರ್ಯದರ್ಶಿ ಡಾ. ಮೀನಾಕ್ಷಿ ಜೊಲ್ಲಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಭಾಷೆಯಲ್ಲಿ ಅತ್ಯುತ್ತಮ ಕೆಲಸ ಮಾಡಿದ ಕೇಂದ್ರ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಉದ್ಯಮಿಗಳಿಗೆ ಒಟ್ಟು ೩೨ ಪ್ರಶಸ್ತಿಗಳನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಮ್ಮೇಳನದ ಅಧ್ಯಕ್ಷತೆಯನ್ನು ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್
