ದೆಹಲಿ, 20 ಜನವರಿ(ಹಿ.ಸ):
ಆ್ಯಂಕರ್ :
ಎರಡು ವರ್ಷಗಳ ಕಾಯುವಿಕೆಯ ನಂತರ ಮತ್ತೊಮ್ಮೆ ಪುರುಷರ 19 ವರ್ಷದೊಳಗಿನವರ ವಿಶ್ವಕಪ್ ಮರಳಿದೆ. ಜನವರಿ 19 ಶುಕ್ರವಾರದಂದು ದಕ್ಷಿಣ ಆಫ್ರಿಕಾದಲ್ಲಿ ಪಂದ್ಯಾವಳಿ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಅಮೆಕರಿಕಾ ವಿರುದ್ಧ ಐರ್ಲೆಂಡ್ 7 ವಿಕೆಟ್ಗಳಿಂದ ಜಯಿಸಿದರೆ, ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಫ್ರಿಕಾ 31 ರನ್ಗಳ ಜಯ ಸಾಧಿಸಿ ಶುಭಾರಂಭ ಮಾಡಿದೆ. ಇಂದು ಐಸಿಸಿ ಅಂಡರ್-19 ವಿಶ್ವಕಪ್ನಲ್ಲಿ ಮೂರು ಪಂದ್ಯಗಳು ನಡೆಯಲಿವೆ. ಮೊದಲಿಗೆ ಭಾರತ ಹಾಗೂ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ನಂತರ ಸ್ಕಾಟ್ಲೆಂಡ್-ಇಂಗ್ಲೆಂಡ್ ಮತ್ತು ಪಾಕಿಸ್ತಾನ-ಅಫ್ಘಾನಿಸ್ತಾನ ಸೆಣೆಸಾಡಲಿದೆ.
ಪ್ರತಿ ಬಾರಿಯಂತೆ, ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುವ ಭಾರತೀಯ ಅಂಡರ್ -19 ತಂಡದ ಮೇಲೆ ಮತ್ತೊಮ್ಮೆ ಎಲ್ಲರ ಕಣ್ಣುಗಳಿವೆ. 2022 ರಲ್ಲಿ ಯಶ್ ಧುಲ್ ನಾಯಕತ್ವದಲ್ಲಿ ಭಾರತವು ಈ ಪ್ರಶಸ್ತಿಯನ್ನು ದಾಖಲೆಯ 5 ನೇ ಬಾರಿ ಗೆದ್ದುಕೊಂಡಿತ್ತು. ಈ ಬಾರಿ ಆರನೇ ಪ್ರಶಸ್ತಿಯನ್ನು ಗೆಲ್ಲುವ ಜವಾಬ್ದಾರಿ ಉದಯ್ ಸಹರನ್ ನಾಯಕತ್ವದ ತಂಡದ ಮೇಲಿದೆ. ಇಂದು ಭಾರತ ತಂಡವು ಮೊದಲ ಬಾರಿಗೆ ಮೈದಾನಕ್ಕಿಳಿಯಲಿದ್ದು, ಬ್ಲೋಮ್ಫಾಂಟೈನ್ ಮೈದಾನದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಅಂಡರ್-19 ವಿಶ್ವಕಪ್ ಪಂದ್ಯ ಭಾರತದ ಕಾಲಮಾನದ ಪ್ರಕಾರ ಮಧ್ಯಾಹ್ನ 1:30 ರಿಂದ ಆರಂಭವಾಗಲಿದೆ. ಈ ಪಂದ್ಯದ ಟಾಸ್ ಮಧ್ಯಾಹ್ನ 1:00 ಗಂಟೆಗೆ ನಡೆಯಲಿದೆ. ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಲೈವ್ ಸ್ಟ್ರೀಮಿಂಗ್ ಡಿಸ್ನಿ ಹಾಟ್ಸ್ಟಾರ್ನಲ್ಲಿ ಲಭ್ಯವಿರುತ್ತವೆ.
ಹಿಂದೂಸ್ತಾನ್ ಸಮಾಚಾರ್
