
ಬೆಂಗಳೂರು, 23 ಜನವರಿ(ಹಿ.ಸ):
ಆ್ಯಂಕರ್ :
ಕರ್ನಾಟಕದ ಉತ್ತರ ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ ಚಳಿ ಇದ್ದು, ಉಳಿದೆಡೆ ಒಣಹವೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಬೆಳಗಿನ ಜಾವ ಚಳಿ ಕಾಣಿಸಿಕೊಂಡರೂ ರಾತ್ರಿ ಬೆಚ್ಚನೆಯ ತಾಪಮಾನ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ 13.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ.
ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಹಿಂದೂಸ್ತಾನ್ ಸಮಾಚಾರ್
