ಗಾಂಧಿನಗರಿ, 23 ಜನವರಿ(ಹಿ.ಸ):
ಆ್ಯಂಕರ್ :ಗುಜರಾತ್ನ ಗಾಂಧಿನಗರದ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದಲ್ಲಿಂದು ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಡಿಜಿಟಲ್ ಫೊರೆನ್ಸಿಕ್ಸ್ ಮತ್ತು ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಆನ್ ಬಿಹೇವಿಯರಲ್ ಫೊರೆನ್ಸಿಕ್ಸ್ ಸಮ್ಮೇಳನಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಜಸ್ಟೀಸ್ ಅರುಣ್ ಕುಮಾರ್ ಮಿಶ್ರಾ ಹಾಗೂ ಗುಜರಾತ್ ರಾಜ್ಯದ ಕಾನೂನು ಮತ್ತು ನ್ಯಾಯ ಸಚಿವ ರಿಷಿಕೇಶ್ ಪಟೇಲ್ ಉಪಸ್ಥಿತರಿರಲಿದ್ದಾರೆ. ಮೂರು ದಿನಗಳ ಕಾಲ ನಡೆಯಲಿರುವ ಬಿಹೇವಿಯರಲ್ ಫೊರೆನ್ಸಿಕ್ಸ್ ಸಮ್ಮೇಳನವನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಷ್ಟ್ರೀಯ ಮಹಿಳಾ ಆಯೋಗ ಹಾಗೂ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಗುಜರಾತ್ ರಾಜ್ಯ ಮಾನವ ಹಕ್ಕುಗಳ ಆಯೋಗ ಜಂಟಿಯಾಗಿ ಆಯೋಜಿಸಿದೆ. ಈ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ನ್ಯಾಯಧೀಶರು, ಕಾನೂನು ಅಧಿಕಾರಿಗಳು, ಪೊಲೀಸ್ ಅಧಿಕಾರು ಹಾಗೂ ಕ್ರಿಮಿನಾಲಜಿಸ್ಟ್ ಗಳು ಸೇರಿದಂತೆ ದೇಶವಿದೇಶಗಳ ಸುಮಾರು ೬೦೦ ಪ್ರತಿನಿಧಿಗಳು ಪಾಲ್ಗೊಳ್ಳಿದ್ದಾರೆ. ಗುಜರಾತ್ ಭೇಟಿ ಸಂದರ್ಭದಲ್ಲಿ ಅಮಿತ್ ಶಾ ಅವರು ಅಹ್ಮದಾಬಾದ್ನ ಭಾವ್ನಗರದಲ್ಲಿ ಆಯೋಜನೆಯಾಗಿರುವ ಮತ್ತೊಂದು ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
