
ಚಂಡಿಗಢ, 27 ಜನವರಿ:
ಆ್ಯಂಕರ್ :ಪಂಜಾಬ್ನ ಹೋಶಿಯಾರ್ಪುರ ಜಿಲ್ಲೆಯಲ್ಲಿ ಶುಕ್ರವಾರ ಕಾರೊಂದು ಟ್ರಕ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದ್ದು ಈ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ . ಹಾಗೂ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಪೊಲೀಸರ ಪ್ರಕಾರ, ಹೋಶಿಯಾರ್ಪುರದ ಮುಕೇರಿಯನ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ವೇಗವಾಗಿ ಬಂದ ಕಾರು ಟ್ರಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.
ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ಸಹಾಯದಿಂದ ಕಾರಿನಲ್ಲಿ ಸಿಲುಕಿದ್ದ ಜನರನ್ನು ಹೊರತೆಗೆದು ಅವರನ್ನು ಮುಕೇರಿಯನ್ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.
ಅಗ್ನಿಶಾಮಕ ದಳದವರು ಕಾರಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಪೊಲೀಸರು ಶವವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಈ ಅಪಘಾತದ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
