ಹೊಸಪೇಟೆ, 2 ಫೆಬ್ರವರಿ (ಹಿ.ಸ):
ಆ್ಯಂಕರ್ : ರಸ್ತೆ ಅಪಘಾತದಲ್ಲಿ ಮೃತಪಟ್ಟ ರೈತ ನಾಯಕ ಜೆ.ಕಾರ್ತಿಕ್ ಅವರ ಮನಗೆ ಸಿಎಂ ಸಿದ್ದರಾಮಯ್ಯನವರು ಶುಕ್ರವಾರದಂದು ಭೇಟಿ ನೀಡಿ ಕಾರ್ತಿಕ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಹೊಸಪೇಟೆಯ ಎಂ.ಪಿ.ಪ್ರಕಾಶ್ ನಗರದಲ್ಲಿರೋ ಜೆ.ಕಾರ್ತಿಕ್ ಅವರ ಮನೆಗೆ ತೆರಳಿದ ಮುಖ್ಯಮಂತ್ರಿಗಳು, ಮೃತರ ಕುಟುಂಬಕ್ಕೆ ರೂ. 5 ಲಕ್ಷಗಳ ಪರಿಹಾರವನ್ನು ಸಿಎಂ ಸಿದ್ದರಾಮಯ್ಯನವರು ಘೋಷಣೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವರುಗಳಾದ ಜಮೀರ್ ಅಹಮ್ಮದ್ ಖಾನ್, ಶಿವರಾಜ್ ತಂಗಡಗಿ, ಶಾಸಕರಾದ ಹೆಚ್.ಆರ್.ಗವಿಯಪ್ಪ, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್ ಸೇರಿದಂತೆ ಮತ್ತಿತರರಿದ್ದರು.
