ನವದೆಹಲಿ, 3 ಫೆಬ್ರವರಿ (ಹಿ.ಸ):
ಆ್ಯಂಕರ್ : ಟಿ20 ವಿಶ್ವಕಪ್ 2024ರ ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 1 ರಿಂದ ಈ ಬಾರಿಯ ಚುಟುಕು ವಿಶ್ವಕಪ್ ಕದನ ಶುರುವಾಗಲಿದ್ದು, ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಯುಎಸ್ಎ ಹಾಗೂ ವೆಸ್ಟ್ ಇಂಡೀಸ್ನಲ್ಲಿ ಜರುಗಲಿರುವ ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಬಿಡುಗಡೆಯಾಗಿದ್ದರೂ ಎಲ್ಲಿಯೂ ಕೂಡ ಪಂದ್ಯಾರಂಭದ ಸಮಯವನ್ನು ಪ್ರಸ್ತಾಪಿಸಲಾಗಿಲ್ಲ. ಅಂದರೆ ಎಷ್ಟು ಗಂಟೆಗೆ ಪಂದ್ಯ ಶುರುವಾಗಲಿದೆ ಎಂಬುದೇ ಈಗ ದೊಡ್ಡ ಪ್ರಶ್ನೆಯಾಗಿ ಉಳಿದಿತ್ತು. ಇದೀಗ ಭಾರತ ತಂಡದ ಪಂದ್ಯಗಳ ಸಮಯ ಬಹಿರಂಗವಾಗಿದೆ. ಟೀಮ್ ಇಂಡಿಯಾದ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ.
ಅಂದರೆ ಭಾರತದ ಪಂದ್ಯಗಳು ಯುಎಸ್ಎನಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಆರಂಭವಾಗಲಿದ್ದು, ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ನೇರ ಪ್ರಸಾರವಾಗಲಿದೆ. ಇಲ್ಲಿ ಭಾರತ ಮತ್ತು ಯುಎಸ್ಎ ನಡುವೆ 10.30 ಗಂಟೆಗಳ ಸಮಯ ವ್ಯತ್ಯಾಸವಿದೆ. ಅತ್ತ ಯುಎಸ್ಎನಲ್ಲಿ ರಾತ್ರಿಯಾಗಿದ್ದರೆ, ಇತ್ತ ಭಾರತದಲ್ಲಿ ಬೆಳಿಗ್ಗೆಯಾಗಿರುತ್ತದೆ. ಹೀಗಾಗಿಯೇ ಭಾರತದ ಪಂದ್ಯಗಳನ್ನು ಯುಎಸ್ಎನಲ್ಲಿ ಬೆಳಿಗ್ಗೆ ಆಯೋಜಿಸಲು ನಿರ್ಧರಿಸಲಾಗಿದೆ. ಇದರಿಂದ ವೀಕ್ಷಕರ ಕೊರತೆ ಉಂಟಾಗುವುದಿಲ್ಲ. ಹೀಗಾಗಿ ಭಾರತದ ಪಂದ್ಯಗಳಿಗೆ ಬೆಳಿಗ್ಗೆ ಸಮಯ ನಿಗದಿ ಮಾಡಲಾಗಿದೆ.
ಭಾರತ ಮತ್ತು ಪಾಕ್ ಮುಖಾಮುಖಿ:
ಟಿ20 ವಿಶ್ವಕಪ್ನ ಹೈವೊಲ್ಟೆಜ್ ಫೈಟ್ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಜೂನ್ 9 ರಂದು ನಡೆಯಲಿದೆ. ಭಾನುವಾರ ನಡೆಯಲಿರುವ ಈ ಪಂದ್ಯಕ್ಕೆ ನ್ಯೂಯಾರ್ಕ್ನ ಹೊಸ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ಈ ಪಂದ್ಯವು ಯುಎಸ್ಎ ಕಾಲಮಾನ ಬೆಳಿಗ್ಗೆ 9.30 ರಿಂದ ಶುರುವಾಗಲಿದ್ದು, ಭಾರತದಲ್ಲಿ ರಾತ್ರಿ 8 ಗಂಟೆಯಿಂದ ನೇರ ಪ್ರಸಾರವಾಗಲಿದೆ.
