ಬೆಂಗಳೂರು, 4 ಫೆಬ್ರವರಿ :
ಆ್ಯಂಕರ್ :ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದ್ದು, ರಾಜ್ಯದ ಬಹುತೇಕ ಕಡೆ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳ ಕಂಡುಬಂದಿದೆ. ಸೆಕೆಯ ಅನುಭವವಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆದಿದೆ.
